ಆಗಸ್ಟ್‌ 09 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ

ಆಗಸ್ಟ್‌ 09 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ 

ಬೆಂಗಳೂರು : ಆಗಸ್ಟ್ 9ರ ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Education Minister BC Nagesh ) ಘೋಷಿಸಿದ್ದಾರೆ.


ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು.


ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಸೋಮವಾರ ಮಧ್ಯಾಹ್ನ 3.30 ಕ್ಕೆ ಎಸ್‌ಎಸ್‌ಎಲ್​ಸಿ ಬೋರ್ಡ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ವರ್ಷ ಸುಮಾರು 8.72 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
Previous Post Next Post