ನಾಳೆ ಬೆಳಿಗ್ಗೆ 10.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸಂಜೆ 4 ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ

ನಾಳೆ ಬೆಳಿಗ್ಗೆ 10.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸಂಜೆ 4 ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ 


ಬೆಂಗಳೂರು : ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ( Second PUC Results ) ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ದಿನಾಂಕ 20-09-2021ರ ನಾಳೆ ಬೆಳಿಗ್ಗೆ 10.30ಕ್ಕೆ ಪ್ರಕಟಗೊಳ್ಳಲಿದೆ. ಇನ್ನೂ ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆದಂತ ಸಾಮಾನ್ಯ ಅರ್ಹತಾ ಪರೀಕ್ಷೆ ( KCET-2021 ) ಫಲಿತಾಂಶ ನಾಳೆ ಸಂಜೆ 4 ಗಂಟೆಗೆ ಪ್ರಕಟಗೊಳ್ಳಲಿದೆ.


ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡ ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ದಿನಾಂಕ 20-09-2021ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು http://krrresults.nic.in ಲಿಂಕ್ ನ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿ ಎಂಬುದಾಗಿ ತಿಳಿಸಿದ್ದಾರೆ.


ಇನ್ನೂ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( Karnataka Common Entrance Test KCET) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.


ಫಲಿತಾಂಶವು ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea/ ಈ ಲಿಂಕ್ ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡೋ ಮೂಲಕ, ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

أحدث أقدم