ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ರಾಜ್ಯದಲ್ಲಿ ಇಂದು 1,102 ಪಾಸಿಟಿವ್, ಒಟ್ಟು ಸಕ್ರಿಯ ಪ್ರಕರಣ ಸಂಖ್ಯೆ 17,058
ಬೆಂಗಳೂರು, ಸೆ.8: ರಾಜ್ಯದಲ್ಲಿ ಬುಧವಾರ 1,102 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 17 ಜನರು ಸೋಂಕಿಗೆ ಬಲಿಯಾಗಿದ್ದು, 1,458 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,58,090ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,458ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 17,058ಕ್ಕೆ ಇಳಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,102 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 6, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 338, ಚಾಮರಾಜನಗರ 8, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 51, ಚಿತ್ರದುರ್ಗ 6, ದಕ್ಷಿಣ ಕನ್ನಡ 200, ದಾವಣಗೆರೆ 7, ಧಾರವಾಡ 5, ಹಾಸನ 51, ಹಾವೇರಿ 2, ಕಲಬುರಗಿ 7, ಕೊಡಗು 33, ಕೋಲಾರ 12, ಕೊಪ್ಪಳ 4, ಮಂಡ್ಯ 20, ಮೈಸೂರು 64, ರಾಯಚೂರು 3, ರಾಮನಗರ 4, ಶಿವಮೊಗ್ಗ 55, ತುಮಕೂರು 31, ಉಡುಪಿ 133, ಉತ್ತರ ಕನ್ನಡ 40, ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.