ದಕ್ಷಿಣ ಕನ್ನಡ ಸೇರಿ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು: ರಾಜ್ಯ ಸರಕಾರದ ಆದೇಶ

ದಕ್ಷಿಣ ಕನ್ನಡ ಸೇರಿ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು: ರಾಜ್ಯ ಸರಕಾರದ ಆದೇಶ 


ಬೆಂಗಳೂರು : ದ.ಕ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.


ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟ್ ದರ ಇರುವ ಕಾರಣ ವೀಕೆಂಡ್ ಕರ್ಫ್ಯೂ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರ ಆದೇಶ ನೀಡಿದೆ.


ಒಂದು ವೇಳೆ ಮತ್ತೆ ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೆ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲು ಆಯಾ ಜಿಲ್ಲಾಡಳಿತಕ್ಕೆ ಸರ್ಕಾರ ಅಧಿಕಾರವನ್ನು ನೀಡಿದೆ. ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳು ವೀಕೆಂಡ್ ಕರ್ಫ್ಯೂನಂಥ ನಿಯಮವನ್ನು ಜಾರಿಗೊಳಿಸಬಹುದೆಂದು ಸರ್ಕಾರ ಆದೇಶದಲ್ಲಿ ಹೇಳಿದೆ.

Previous Post Next Post