ರಾಜ್ಯದಲ್ಲಿ 451 ಕೊರೊನ ಸೋಂಕು ದೃಢ, ಹತ್ತು ಸಾವಿರಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ 451 ಕೊರೊನ ಸೋಂಕು ದೃಢ, ಹತ್ತು ಸಾವಿರಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ 


ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 451 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.


ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,395ಕ್ಕೆ ಕುಸಿದಿದೆ.


ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 451 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 187, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 27, ದಾವಣಗೆರೆ 2, ಧಾರವಾಡ 5, ಗದಗ 1, ಹಾಸನ 43, ಕೊಡಗು 14, ಕೋಲಾರ 4, ಮಂಡ್ಯ 11, ಮೈಸೂರು 48, ರಾಮನಗರ 1, ಶಿವಮೊಗ್ಗ 9, ತುಮಕೂರು 17, ಉಡುಪಿ 21, ಉತ್ತರ ಕನ್ನಡ ಜಿಲ್ಲೆಯಲ್ಲಿ 37 ಪ್ರಕರಣ ಪತ್ತೆಯಾಗಿವೆ.

Previous Post Next Post