ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸ ಇಂದಿನಿಂದ ಆರಂಭವಾಗಿದ್ದು, ನಾಳೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಗಂಟೆಗೆ ಮೈಸೂರಿಗೆ ರಾಷ್ಟ್ರಪತಿಗಳು ಬೆಂಗಳೂರಿನಿಂದ ತೆರಳಲಿದ್ದಾರೆ. ಗುರುವಾರ ಬೆಳಗ್ಗೆ 11. 30ಕ್ಕೆ ಬಿ.ಆರ್. ಹಿಲ್ಸ್ ನ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿರುವ ರಾಷ್ಟ್ರ ಪತಿ ರಾಮನಾಥ ಕೋವಿಂದ್ ಅವರು ಮಧ್ಯಾಹ್ನ 1.30ಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಾಹ್ನ ನಾಳೆ 3.30ಕ್ಕೆ ಸಿಮ್ಸ್ ನಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಸಂಜೆ 5.15 ಕ್ಕೆ ಚಾಮರಾಜನಗರದಿಂದ ಮೈಸೂರು ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಜೆ 6.10ಕ್ಕೆ ಮೈಸೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಲಿದ್ದು, ಗುರುವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ 10 .30ಕ್ಕೆ ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣ ಮಾಡಲಿದ್ದು, ಶುಕ್ರವಾರ ಬೆಳಗ್ಗೆ 11.50ಕ್ಕೆ ಶೃಂಗೇರಿಯಲ್ಲಿ ಶಂಕರ ಅದ್ವೈತ ರಿಸರ್ಚ್ ಸೆಂಟರ್ ಗೆ ಭೇಟಿ ನೀಡಲಿದ್ದಾರೆ. ಶುಕ್ರವಾರ ಸಂಜೆ 3.15ಕ್ಕೆ ಶೃಂಗೇರಿಯಿಂದ ಮಂಗಳೂರಿಗೆ ಪ್ರಯಾಣ ಮಾಡಲಿದ್ದು ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.