ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಇದರ ನೂತನ ಅಧ್ಯಕ್ಷರಾಗಿ ಎನ್ ಕೆಎಂ ಶಾಫಿ ಸಅದಿ ಆಯ್ಕೆ
ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಡಾಕ್ಟರ್ ಯೂಸುಫ್ ಅವರ ಮರಣದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಬೆಂಗಳೂರು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಚುನಾವಣೆ ನಡೆಯಿತು.
ಬೆಳಿಗ್ಗೆ ಹತ್ತು ಮೂವತ್ತರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಒಟ್ಟು ಇಬ್ಬರು ನಾಮಪತ್ರ ಸಲ್ಲಿಸಿದರು. ಅಂತಿಮವಾಗಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಶಾಫಿ ಸಅದಿ ಅವರು ವಕ್ಫ್ ಬೋರ್ಡ್ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದರು.