ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ
ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರವು ಸೋಮವಾರದಂದು 'ಪದ್ಮಶ್ರೀ' ಪ್ರಶಸ್ತಿ ಪ್ರದಾನಿಸಿ ಗೌರವಿಸಿತ್ತು. ಈ ಸಂದೃಭ ಹಾಜಬ್ಬ ಚಪ್ಪಲಿ ಹಾಕದೇ, ಸಾಂಪ್ರದಾಯಿಕ ಉಡುಪು ಶರ್ಟ್ ಹಾಗೂ ಪಂಚೆಯಲ್ಲಿ ತೆರಳಿ ಸರಳತೆ ಮೆರೆದಿದ್ದರು. ಕಿತ್ತಳೆ ವ್ಯಾಪಾರಿ ಹಾಜಬ್ಬ, ಕಿತ್ತು ತಿನ್ನುವ ಬಡತನದ ಮಧ್ಯೆಯೂ ಕೂಡಾ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟು, ಹಲವು ಮಕ್ಕಳ ಬಾಳಿನಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ್ದಕ್ಕೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಬಳಿಕ ಅವರನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಅಧಿಕಾರಿಗಳು ಉಪಸ್ಥಿತರಿದ್ದರು.