25 ಸ್ಥಾನಗಳಿಗೆ ವಿಧಾನ ಪರಿಷತ್ ನ MLC election ಇಂದು
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು ಮಂಡ್ಯ ಕ್ಷೇತ್ರದಲ್ಲಿನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ವಿಧಾನಪರಿಷತ್ ನ 25 ಸ್ಥಾನಗಳ ಪೈಕಿ ಕಾಂಗ್ರೆಸ್ ನಿಂದ 20, ಬಿಜೆಪಿಯಿಂದ 20 ಹಾಗೂ ಜೆಡಿಎಸ್ ನಿಂದ 6 ಸೇರಿದಂತೆ 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರಗೆ ಮತದಾನ ನಡೆಯಲಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಚುನಾವಣಾ ಆಯೋಜ ಸೂಚನೆ ನೀಡಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಬಳಕೆ ಮಾಡುವುದು ಮತ್ತು ಮತದಾನದ ವೇಳೆ ಅಂತರ ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಒಟ್ಟು 6072 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 47,205 ಪುರುಷ ಮತದಾರರು, 51,854 ಮಹಿಳಾ ಮತದಾರರು ಸೇರಿದಂತೆ ಒಟ್ಟು 99062 ಮತದಾರರು ಮತಚಲಾಯಿಸಲಿದ್ದಾರೆ. ಡಿಸೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.