ರಾಜ್ಯದಲ್ಲಿ ಇಂದು 1187 ಪಾಸಿಟಿವ್ , ಬೆಂಗಳೂರಿನಲ್ಲಿ 923 ಕೇಸ್

ರಾಜ್ಯದಲ್ಲಿ ಇಂದು 1187 ಪಾಸಿಟಿವ್ , ಬೆಂಗಳೂರಿನಲ್ಲಿ 923 ಕೇಸ್


ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1187 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸತತ ಎರಡನೇ ದಿನ ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.


ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 923 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10292ಕ್ಕೆ ಜಿಗಿತ ಕಂಡಿದೆ.Previous Post Next Post