ರಾಜ್ಯದಲ್ಲಿ ಮುಂದುವರಿದ ಕೊರೋನ ಕಾಟ, ಇಂದು 2479 ಪಾಸಿಟಿವ್, ಬೆಂಗಳೂರಿನಲ್ಲಿ 2053 ಕೇಸ್
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2.9ರಷ್ಟಿದೆ, ಇಂದು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ, ಇದುವರೆಗೂ ಒಟ್ಟು 77 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ನಾಲ್ಕು ಮಂದಿ ಮೃತಪಟ್ಟಿದ್ದಾರೆ. 95,391 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.
ರಾಜ್ಯದಲ್ಲಿ ಒಂದೇ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಶೇ. 0.99ರಷ್ಟು ಹೆಚ್ಚಾಗಿದೆ. ಹಾಗಾಗಿ ಇದು ಮೂರನೇ ಅಲೆ ಎಂದೇ ಹೇಳಬಹುದು ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಸೋಮವಾರ ಕೊರೊನಾ ಸೋಂಕಿತ ಪ್ರಕರಣಗಳು ಶೇ.1.60ರಷ್ಟಿತ್ತು ಅದು ಈಗ 2.90ನಷ್ಟು ಏರಿಕೆಯಾಗಿದೆ.ಕಳೆದ 1 ವಾರದಿಂದ ಬೆಂಗಳೂರಲ್ಲಿ ಡೆಡ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ.