ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು, ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆ ಓಪನ್, ಹೋಟೆಲ್ ರೆಸ್ಟೋರೆಂಟ್ ಶೇ.50ರ ಮಿತಿ ವಾಪಾಸ್

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ರದ್ದು, ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆ ಓಪನ್, ಹೋಟೆಲ್ ರೆಸ್ಟೋರೆಂಟ್ ಶೇ.50ರ ಮಿತಿ ವಾಪಾಸ್   


ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಆದ್ರೇ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 146 ಮಕ್ಕಳು ಮಾತ್ರವೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.


ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ದರ 19-01-2022ರಂತೆ ಶೇ.18.08ರಷ್ಟಿದೆ. ಪೀಕ್ ಸಂದರ್ಭದಲ್ಲಿ ಶೇ.33ರಷ್ಟು ಇತ್ತು. ಈಗ 20.09ರಷ್ಟಕ್ಕೆ ಬಂದಿದೆ ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.


ಇನ್ನೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮದುವೆಗೆ ಅವಕಾಶ, ಓಪನ್ ಸ್ಥಳದಲ್ಲಿ 300ಕ್ಕೆ ಅವಕಾಶ ನೀಡಲಾಗಿದೆ. ಕಚೇರಿ ಕೆಲಸದ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸೇವೆ ಬಂದ್ ಆಗಿತ್ತು. ಆ ಸೇವೆಗಳನ್ನು ಪುನರಾರಂಭಿಸೋದಕ್ಕೆ ಅವಕಾಶ ನೀಡಲಾಗಿದೆ. ಅರ್ಚನೆ, ಮಂಗಳಾರತಿಗೆ ಅವಕಾಶ ನೀಡಲಾಗಿದೆ. ಶೇ.50ರ ಜನರ ಮುತಿ ಮುಂದುವರೆಯಲಿದೆ ಎಂದರು.


ಜಾತ್ರೆ, Rally, ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಜಿಮ್ ಗಳಿಗೆ ಶೇ.50ರ ಮಿತಿಯನ್ನು ನಿಗದಿ ಪಡಿಸಲಾಗಿದೆ. ಸ್ಪೋರ್ಟ್ಸ್ ಸ್ಟೇಡಿಯಂಗಳ ಮಿತಿ ಶೇ.50ರಷ್ಟು ಮುಂದುವರೆಸಲಾಗಿದೆ. ಮಹಾರಾಷ್ಟ್ರಾ, ಕೇರಳ, ಗೋವಾದಿಂದ ಬರೋರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.


ಬೆಂಗಳೂರಿನಲ್ಲಿ ಎಲ್ಲಾ ತರಗತಿಗಳು ಪುನರಾರಂಭ: ಬಿ.ಸಿ.ನಾಗೇಶ್


ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳನ್ನು ಪುನರಾರಂಭಿಸಲು‌ ನಿರ್ಧರಿಸಲಾಗಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಲ್ಲ ತರಗತಿಗಳು ಸೋಮವಾರದಿಂದ ಕಾರ್ಯಾ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.


ಸಭೆಯ ಮುಖ್ಯಾಂಶ

►ಜ.31ರಿಂದ ರಾತ್ರಿ ಕರ್ಫ್ಯೂ ರದ್ದು

►ಬೆಂಗಳೂರು ನಗರದಲ್ಲಿ ಜ.31ರಿಂದ ಶಾಲೆ, ಕಾಲೇಜುಗಳನ್ನು ಪುನಾರರಂಭ.

►ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ

►ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ.50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧ ತೆರವು.

►ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇತರ ಸ್ಥಳಗಳಲ್ಲಿ ಶೇ. 50ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ.

►ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.

►ಸರ್ಕಾರದ ಸಚಿವಾಲಯದಲ್ಲಿ ಶೇ.50ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ.ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅವಕಾಶ

►ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ. ಶೇ.50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ

►ಯಾವುದೇ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.

►ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ.50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

►ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

►ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.

►ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧಾರ

►ಕೋವಿಡ್ ಹೊರತುಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ


ಮುಂದೆ ಓದಿ 

أحدث أقدم