ಕಾಂಗ್ರೆಸ್ ಪಾದಯಾತ್ರೆಗೆ ಅಭೂತಪೂರ್ವ ಜನಬೆಂಬಲ: ಕೋವಿಡ್ ನಿಯಮ ಪಾಲನೆಯಾಗುತ್ತಿಲ್ಲ, ಪಾದಯಾತ್ರೆ ತಡೆಗೆ ಯಾವ ಕ್ರಮ ಕೈಗೊಂಡಿದ್ದೀರಿ? ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಕಾಂಗ್ರೆಸ್ ಪಾದಯಾತ್ರೆಗೆ ಅಭೂತಪೂರ್ವ ಜನಬೆಂಬಲ: ಕೋವಿಡ್ ನಿಯಮ ಪಾಲನೆಯಾಗುತ್ತಿಲ್ಲ, ಪಾದಯಾತ್ರೆ ತಡೆಗೆ ಯಾವ ಕ್ರಮ ಕೈಗೊಂಡಿದ್ದೀರಿ? ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ  



ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಲ್ಲೇ ಇದೆ. ಇತ್ತ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಕೋವಿಡ್ ಹೆಚ್ಚುತ್ತಿರುವ ವೇಳೆ ಪಾದಯಾತ್ರೆ ನಡೆಸಲು ಅನುಮತಿ ನೀಡಿದ್ದು ಯಾರು? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ.


ಇದೇ ವೇಳೆ ಕೆಪಿಸಿಸಿಗೆ ಪ್ರಶ್ನಿಸಿರುವ ಪೀಠ, ರ್‍ಯಾಲಿಗೆ ಮುನ್ನ ನೀವು ಅನುಮತಿ ಪಡೆದಿದ್ದೀರಾ?, ಈ ಕುರಿತು ಉತ್ತರಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕೀತು ಮಾಡಿದೆ.


ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಅಧಿಕವಾಗುತ್ತಿದ್ದೆ ಈ ನಡುವೆ ಕಾಂಗ್ರೆಸ್ ನಿಯಮಗಳನ್ನು ನಿರ್ಲಕ್ಷ್ಯಸಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಎಂಬುವರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಸಿಜೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.


ಅರ್ಜಿದಾರರ ಪರ ವಕೀಲರಾದ ಶ್ರೀಧರ್ ಪ್ರಭು, ಅರ್ಜಿಯನ್ನು ತುರ್ತಾಗಿ ಪರಿಗಣಿಸಬೇಕು. ಕೋವಿಡ್ ತುರ್ತು ಪರಿಸ್ಥಿತಿ ವೇಳೆ ಪಾದಯಾತ್ರೆ ಕೈಗೊಂಡಿರುವ ಕ್ರಮ ಸರಿಯಾದುದಲ್ಲ ಎಂದು ವಿವರಿಸಿದರು.


ಈ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಾದ ಮಂಡಿಸಿ, ಸರ್ಕಾರ ಪಾದಯಾತ್ರೆ ನಡೆಸುತ್ತಿರುವ ಮುಖಂಡರ ವಿರುದ್ಧ ನಿಯಮ ಉಲ್ಲಂಘನೆಗಾಗಿ ಎಫ್‌ಐಆರ್ ದಾಖಲಿಸಿದೆ ಎಂದು ತಿಳಿಸಿದರು.


ಈ ವೇಳೆ ಪ್ರತಿಕ್ರಿಯಿಸಿದ ಪೀಠ, ಕೋವಿಡ್ ಹೆಚ್ಚುತ್ತಿರುವ ಈ ವೇಳೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಅನುಮತಿ ಕೊಟ್ಟಿದ್ದೀರಿ?, ಒಂದು ವೇಳೆ, ಅನುಮತಿ ಕೊಟ್ಟಿಲ್ಲವಾದರೆ ಕ್ರಮ ಜರುಗಿಸಲು ಕಾಯುತ್ತಿರುವುದೇಕೆ?,ಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ರಾಜ್ಯ ಸರ್ಕಾರಕ್ಕೆ ಇದೇ ವೇಳೆ ಕೋರ್ಟ್ ಪ್ರಶ್ನಿಸಿದೆ.


ಕೆಪಿಸಿಸಿಗೆ ತುರ್ತು ನೋಟಿಸ್​ ಸರ್ಕಾರ ಹಾಗೂ ಕೆಪಿಸಿಸಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು,ಒಂದು ದಿನ ದಲ್ಲಿ ಉತ್ತರಿಸುವಂತೆ ಹೇಳಿದ್ದು, ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಿತು.


ಕೋರ್ಟ್ ಸೂಚಿಸಿದರೆ ಪಾದಯಾತ್ರೆ ಕೈಬಿಡುತ್ತೇವೆ: ಸಿದ್ದರಾಮಯ್ಯ ಘೋಷಣೆ 


ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಒಂದು ವೇಳೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕಾನೂನು ಎತ್ತಿ ಹಿಡಿಯಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿಯೇ ಜಾತ್ರೆ ನಡೆದಿದೆ. ನಾವು ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.



Previous Post Next Post