ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆದೇಶ, ಪಕ್ಷಕ್ಕೆ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಿ: ರಾಹುಲ್ ಗಾಂಧಿ

ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆದೇಶ, ಪಕ್ಷಕ್ಕೆ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಿ: ರಾಹುಲ್ ಗಾಂಧಿ

ರಾಮನಗರ : ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರ ಪಾದಯಾತ್ರೆ ನಡೆಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.


ಕಾಂಗ್ರೆಸ್ ಪಾದಯಾತ್ರೆಯ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಮೇಕೆದಾಟು ಪಾದಯಾತ್ರೆಯ ಬಗ್ಗೆ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.


ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಪಕ್ಷಕ್ಕೆ ಮುಜುಗರವಾಗದಂತೆ ನಿರ್ಧಾರ ಕೈಗೊಳ್ಳಿ, ಈಗಾಗಲೇ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕಾಗಿ ವರ್ಚುವಲ್ ಮೂಲಕ ಸಭೆ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ.


ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದ್ದು ಮೂರನೇ ಅಲೆಯ ನಂತರ ರಾಮನಗರದಿಂದ ಯಾತ್ರೆ ಮುಂದುವರಿಯುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು 
Previous Post Next Post