ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್ ಬೈ ಎಂದ ವಿರಾಟ್ ಕೊಹ್ಲಿ

ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್ ಬೈ ಎಂದ ವಿರಾಟ್ ಕೊಹ್ಲಿ


ಭಾರತದ ಟೆಸ್ಟ್ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಸುದೀರ್ಘವಾಗಿ ಬರೆದಿರುವ ಅವರು, ಟೆಸ್ಟ್ ತಂಡದ ನಾಯಕತ್ವವನ್ನು ಕೈ ಬಿಟ್ಟು ಅಚ್ಚರಿ ಮೂಡಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ ಈ ನಿರ್ಧಾರ ಅವರು ಕೈಗೊಂಡಿದ್ದಾರೆ. ಈ ಹಿಂದೆ ಟಿ20 ಹಾಗೂ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಿದ್ದ ಕೊಹ್ಲಿ ಇದೀಗ ದೀಢಿರ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ವಿರಾಟ್ ಕೊಹ್ಲಿ 2014 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರು.
Previous Post Next Post