ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಶುಕ್ರವಾರ ನಿರ್ಧಾರ, ರಾಜ್ಯದಲ್ಲಿ ಲಾಕ್ಇ ಡೌನ್ ಇಲ್ಲ: ಸಚಿವ ಆರ್ ಅಶೋಕ್

ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಶುಕ್ರವಾರ ನಿರ್ಧಾರ, ರಾಜ್ಯದಲ್ಲಿ ಲಾಕ್ಇ ಡೌನ್ ಇಲ್ಲ: ಸಚಿವ ಆರ್ ಅಶೋಕ್  


ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೋನಾ ಪೀಕ್ ಗೆ ( Corona Virus ) ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ( Weekend Curfew ) ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.


ಅಲ್ಲಿಯವರೆಗೆ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ( Karantaka Lockdown ) ಇಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ( Minister R Ashok ) ಸ್ಪಷ್ಟ ಪಡಿಸಿದರು.


ಈ ಕುರಿತಂತೆ ಸಿಎಂ ನೇತೃತ್ವದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದರು. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚಿನದಾಗಿ ಮಾಡಲಾಗುತ್ತಿದೆ. ಅಷ್ಟು ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಲಸಿಕಾಕರಣವು ಐದಾರು ಜಿಲ್ಲೆಗಳಲ್ಲಿ ಕಡಿಮೆ ಆಗಿದೆ. ಆ ಜಿಲ್ಲೆಗಳ ಡಿಸಿಗಳ ಜೊತೆಗೆ ಲಸಿಕಾಕರಣ ಹೆಚ್ಚು ಮಾಡೋದಕ್ಕೆ ಸೂಚಿಸಲಾಗಿದೆ ಎಂದರು.


ಎಲ್ಲಾ ತಜ್ಞರ ಅಭಿಪ್ರಾಯದ ನಂತ್ರ ಶುಕ್ರವಾರ ಸಭೆಯನ್ನು ಸೇರಿ ವೀಕೆಂಡ್, ನೈಟ್ ಕರ್ಪ್ಯೂ ವಿಸ್ತರಣೆ, ಅಂತ್ಯದ ಬಗ್ಗೆ ನಿರ್ಧಾರ ಕೈಗೊಳ್ಳವ ಬಗ್ಗೆ ಸಿಎಂ ಸೂಚಿಸಿದ್ದಾರೆ. ಅಲ್ಲಿಯವರೆಗೆ ಈಗಿರುವಂತ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ನಿಯಂತ್ರಣ ಕ್ರಮಗಳು ಮುಂದುವರೆಯಲಿವೆ. ಆ ಬಗ್ಗೆ ಶುಕ್ರವಾರದ ಸಿಎಂ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.


ಇವತ್ತು ಲಾಕ್ ಡೌನ್ ಬಗ್ಗೆ ಕೂಡ ಚರ್ಚಿಸಲಾಗಿದೆ. ಆರೋಗ್ಯ ಸಚಿವರು, ಉನ್ನತ ಶಿಕ್ಷಣ ಸಚಿವರು ಸೇರಿದಂತೆ ಸಿಎಂ ಕೂಡ ಲಾಕ್ ಡೌನ್ ಮಾಡೋದು ಬೇಡವೆಂದು ಅಭಿಪ್ರಾಯ ಪಟ್ಟಿದ್ದಾರೆ. ಈಗಾಗಲೇ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಜಾರಿಯಲ್ಲಿದೆ. ಇದರ ನಡುವೆ ಲಾಕ್ ಡೌನ್ ( Lockdown ) ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಲಾಕ್ ಡೌನ್ ಮಾಡೋ ಪ್ರಮೇಯವೇ ಇಲ್ಲ ಎಂದು ಸಿಎಂ ಕೂಡ ತಿಳಿಸಿದ್ದಾರೆ. ತಜ್ಞರ ಅಭಿಪ್ರಾಯ ಕೂಡ ಇದೇ ಆಗಿದೆ. ಶುಕ್ರವಾರ ವೀಕೆಂಡ್ ಕರ್ಪ್ಯೂ ಬಗ್ಗೆ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಪ್ರಮುಖ ಅಂಶಗಳು:

1. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ನೀಡುವುದರ ಜೊತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ


2. ಜನರು ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ


3. ಹೋಮ್ ಐಸೊಲೇಷನ್ ಹೆಚ್ಚಿಸಲು ಸೂಚಿಸಲಾಗಿದ್ದು, ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು


4. ಕೊವಿಡ್-19 ಸೋಂಕು ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸೂಚಿಸುವುದು


5. ಔಷಧಿ ಕಿಟ್ ಅನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚನೆ


6. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆದು ಹಾಕುವುದು


7. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು


8. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಅನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು


9. ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು


10. ಆಮ್ಲಜನಕ ಘಟಕಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚನೆ


11. ಕೊವಿಡ್-19 ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ


12. ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು


13. ಕೊರೊನಾವೈರಸ್ ಲಸಿಕೆ ಅಭಿಯಾನವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ


14. ಔಷಧಿಗಳನ್ನು ಕೂಡಲೇ ಒದಗಿಸಬೇಕು ಹಾಗೂ ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ತೆಗೆದುಕೊಳ್ಳಬೇಕು


15. ಜನರು ಕೊವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನ


16. ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ


17. ಕೊರೊನಾವೈರಸ್ ಲಸಿಕೆಯ ಎರಡನೇ ಡೋಸ್ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧಾರ


18. 15 ರಿಂದ 18 ವರ್ಷ ವಯೋಮಾನದವರಿಗೆ ಕೊವಿಡ್-19 ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ಸೂಚನೆ.

أحدث أقدم