ರಾಜ್ಯದಲ್ಲಿ ಮತ್ತೆ ಕೊರೊನ ಕಾಟ: ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ, ತಜ್ಞರೊಂದಿಗೆ ನಾಳೆ ಸಿಎಂ ಮಹತ್ವದ ಸಭೆ

ರಾಜ್ಯದಲ್ಲಿ ಮತ್ತೆ ಕೊರೊನ ಕಾಟ: ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ, ತಜ್ಞರೊಂದಿಗೆ ನಾಳೆ ಸಿಎಂ ಮಹತ್ವದ ಸಭೆ 


ಬೆಂಗಳೂರು: ನಾಳೆ ಸಂಜೆ 6.30 ಕ್ಕೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಲಿದೆ.


ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ.


ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ದೀರ್ಘಾವಧಿ ಕಠಿಣ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಗುತ್ತದೆ.


ತಜ್ಞರೊಂದಿಗೆ ಸಭೆ ನಡೆಸಿ ನಿರ್ಬಂಧ ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕೊರೋನಾ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ನಿರ್ಬಂಧ ಹೇರುವ ಬಗ್ಗೆ ಚರ್ಚೆ ನಡೆಸಲಿದ್ದು, ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Previous Post Next Post