ರಾಜ್ಯಾದ್ಯಂತ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಆರಂಭ

ರಾಜ್ಯಾದ್ಯಂತ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಆರಂಭ


ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹೇರಿರುವ ವೀಕೆಂಡ್ ಕರ್ಪ್ಯೂಗೆ ಕ್ಷಣ ಗಣನೆ ಆರಂಭವಾಗಿದ್ದು, ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಇರಲಿದೆ.


ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕುತ್ತಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿದರೆ ನಿಮ್ಮ ವಾಹನ ಸೀಜ್ ಆಗಲಿದೆ. ಅನಗತ್ಯವಾಗಿ ರಸ್ತೆಯಲ್ಲಿ ಅಡ್ಡಾಡುವವರ ವಿರುದ್ಧ ಪೊಲೀಸರು ಕೇಸ್ ಹಾಕಲಿದ್ದಾರೆ.


ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ


ರಾಜ್ಯಾಧ್ಯಂತ ವಾರಾಂತ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು

  • ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ತೆರೆದಿರಲು ಅನುಮತಿ. ತುರ್ತು ಸೇವೆ ಕಚೇರಿಗಳು ತೆರೆದಿರಲು ಅವಕಾಶ
  • ಎಲ್ಲಾ ಸಾರ್ವಜನಿಕ ಪಾರ್ಕ್ ಗಳು ಬಂದ್
  • ಐಟಿ ಕಂಪನಿಗಳು ವಾರಾಂತ್ಯ ಕರ್ಪ್ಯೂ ನಡುವೆಯೂ ಕೆಲಸಕ್ಕೆ ಅವಕಾಶ. ನೌಕರರು ಐಡಿ ಕಾರ್ಡ್ ತೋರಿಸಿ ಕಚೇರಿಗೆ ತೆರಳಲು ಅನುಮತಿ
  • ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ
  • ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ
  • ತಳ್ಳುಗಾಡಿಯಲ್ಲಿ ಮಾರಾಟಮಾಡಲು ಅವಕಾಶ
  • ಹೋಂ ಡಿಲಿವರಿಗೆ ಅವಕಾಶ
  • ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಕೊಂಡಯ್ಯಲು ಅನುಮತಿ

أحدث أقدم