ಈಗಾಗಲೇ ಬಿಬಿಎಂಪಿ ಮುಖ್ಯ ಆಯುಕ್ತರು ಸಭೆ ನಡೆಸಿ, 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಜತೆಗೆ ಮುಂಜಾಗ್ರತಾ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಕ್ರಮ ವಹಿಸಿರುವ ಅಧಿಕಾರಿಗಳು ಸದ್ಯ ಒಟ್ಟು 1.39 ಲಕ್ಷ ಮಂದಿಯ ಮಾಹಿತಿ ಕಲೆ ಹಾಕಿದ್ದಾರೆ. ಎಲ್ಲರಿಗೂ ಸರ್ಕಾರದ ನಿರ್ದೇಶನ ಮತ್ತು ಮಾರ್ಗಸೂಚಿ ಅನ್ವಯ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸಿಎಂ ಚಾಲನೆ ಇಂದು
ಸೋಮವಾರ ಬೆಳಗ್ಗೆ 10ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಾಜಿನಗರದಲ್ಲಿ ಮುಂಜಾಗ್ರತಾ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಸಚಿವರು, ಬಿಬಿಎಂಪಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಯಾರು ಅರ್ಹ?:
ವೈದ್ಯಕೀಯ ಸಿಬ್ಬಂದಿ, 60 ವರ್ಷ ಮೇಲ್ಪಟ್ಟಪೂರ್ವರೋಗಪೀಡಿತರು ಹಾಗೂ ಮುಂಚೂಣಿ ಕಾರ್ಯಕರ್ತರು 2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ಅಥವಾ 39 ವಾರ ಆಗಿರಬೇಕು. ಅಂಥವರು ಮುಂಜಾಗ್ರತಾ ಡೋಸ್ ಲಸಿಕೆ ಪಡೆಯಲು ಅರ್ಹ.
ಬೂಸ್ಟರ್ ಡೋಸ್ ಪಡೆಯುವ ವಿಧಾನ :
- ಕೋವಿನ್ ಪೋರ್ಟಲ್ನಲ್ಲಿ ನೋಂದಾಯಿಸಿದಂತೆ ಎರಡು ಡೋಸ್ ಪಡೆದಿರಬೇಕು.
- ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳಾಗಿರಬೇಕು)ಆಗಿರಬೇಕು.
- ಎರಡು ಡೋಸ್ ಪಡೆದಿರುವ ಬಗ್ಗೆ ಮಾಹಿತಿ ಒದಗಿಸಬೇಕು.
ಬೂಸ್ಟರ್ ಡೋಸ್ಗೆ ಯಾವ ಲಸಿಕೆ ನೀಡಲಾಗುತ್ತದೆ?
- ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮೂರನೇ ಡೋಸ್ ಕೋವಿಶೀಲ್ಡ್ ಅನ್ನೇ ಪಡೆಯಬೇಕು.
- ಕೋವ್ಯಾಕ್ಸಿನ್ ಪಡೆದವರು ಮೂರನೇ ಡೋಸ್ಗೆ ಕೋವ್ಯಾಕ್ಸಿನ್ ಅನ್ನೇ ಪಡೆಯಬೇಕು.
ಎಲ್ಲೆಲ್ಲಿ ಬೂಸ್ಟರ್ ಡೋಸ್ ಲಭ್ಯ?
- ಎಲ್ಲಾ ಸರ್ಕಾರಿ ಲಸಿಕಾಕರಣ ಕೇಂದ್ರಗಳಲ್ಲಿ ಲಭ್ಯ.
- ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲೂ ಲಭ್ಯ.
- ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸಿಗಲಿದೆ.
ಯಾವ ಲಸಿಕೆ?:
ಮೊದಲಿನ 2 ಡೋಸ್ ಲಸಿಕೆ ಯಾವ ಕಂಪನಿಯದ್ದಾಗಿರುತ್ತೋ, ಅದೇ ಕಂಪನಿಯ ಲಸಿಕೆಯನ್ನು 3ನೇ ಡೋಸ್ ಆಗಿ ಪಡೆಯಬೇಕು. ಉದಾಹರಣೆಗೆ: ಕೋವ್ಯಾಕ್ಸಿನ್ 2 ಡೋಸ್ ಪಡೆದವರು 3ನೇ ಡೋಸ್ ಆಗಿ ಕೋವ್ಯಾಕ್ಸಿನ್‌ಅನ್ನೇ ಪಡೆಯಬೇಕು. 'ಲಸಿಕೆ ಮಿಶ್ರಣ' (ಬೇರೆ ಕಂಪನಿಯ ಲಸಿಕೆ) ಮಾಡುವಂತಿಲ್ಲ.