ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ನಾಳೆ ಗುರುವಾರ ಮಹತ್ವದ ಸಭೆ

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ನಾಳೆ ಗುರುವಾರ ಮಹತ್ವದ ಸಭೆ, ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಭಾರಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ.


ನಾಳೆ ಸಂಜೆ 4:30 ಕ್ಕೆ ಪ್ರಧಾನಿ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಚರ್ಚೆ ನಡೆಸಲಿದ್ದು, ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.ಸಭೆಯಲ್ಲಿ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.


ಎಲ್ಲಾ ರಾಜ್ಯಗಳ ಸಿಎಂಗಳಿಂದ ಕೊರೊನಾ ಅಂಕಿಅಂಶ, ಸ್ಥಿತಿಗತಿ ಬಗ್ಗೆ ಮೋದಿ ಮಾಹಿತಿ ಪಡೆಯಲಿದ್ದು, ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.


ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಏನಾದರೂ ಕಠಿಣ ಕ್ರಮ ಕೈಗೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.

Previous Post Next Post