ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಯು ಟಿ ಖಾದರ್ ನೇಮಕ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಯು ಟಿ ಖಾದರ್ ನೇಮಕ


ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.​


ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ. ಮಂಗಳೂರು ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾದ ಯು.ಟಿ ಖಾದರ್, ಆರೋಗ್ಯ, ವಸತಿ, ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.


ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದು, ಪರಿಷತ್ ನಲ್ಲಿ ಬಿ.ಕೆ.ಹರಿಪ್ರಸಾದ್ ಅವರನ್ನು ವಿಪಕ್ಷ ನಾಯಕನನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿತ್ತು. ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದ್ದ ಕಾಂಗ್ರೆಸ್ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕ ಖಾದರ್ ಅವರಿಗೆ ಆದ್ಯತೆ ನೀಡಿದೆ.Previous Post Next Post