ಫೆಬ್ರವರಿ 16 ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗ ರಜೆ: ಉನ್ನತ ಶಿಕ್ಷಣ ಇಲಾಖೆ ಆದೇಶ

ಫೆಬ್ರವರಿ 16 ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗ ರಜೆ: ಉನ್ನತ ಶಿಕ್ಷಣ ಇಲಾಖೆ ಆದೇಶ 

ಬೆಂಗಳೂರು: 
ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ.


ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದ್ದು ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.


ಇನ್ನೂ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ರಾಜ್ಯದಲ್ಲಿ 'ಸಮವಸ್ತ್ರ' ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. . ವರ್ಚುವಲ್ ಮೂಲಕ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.


ಸೋಮವಾರದಿಂದ 10ನೇ ತರಗತಿಯವರೆಗೆ ಅಂದ್ರೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಲಿದ್ದು, ನಂತ್ರ ಪೂರ್ವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನ ಪುನರಾರಂಭಿಸಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 'ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಲಿದ್ದು, ನಂತ್ರ ಪೂರ್ವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನ ಪುನರಾರಂಭಿಸಲಾಗುವುದು' ಎಂದರು.ಇನ್ನೂ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ರಾಜ್ಯದಲ್ಲಿ 'ಸಮವಸ್ತ್ರ' ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. . ವರ್ಚುವಲ್ ಮೂಲಕ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.



Previous Post Next Post