ಶಿರವಸ್ತ್ರ ವಿವಾದ: ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಕೆ

ಶಿರವಸ್ತ್ರ ವಿವಾದ: ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಕೆ



ಬೆಂಗಳೂರು: ರಾಜ್ಯದಲ್ಲಿ ಬುಗಿಲೆದ್ದಿರುವ ಹಿಜಾಬ್ ವಿಚಾರ ಕೋರ್ಟ್ ಅಂಗಳದಲ್ಲಿದೆ. ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿರುವ ಹೈಕೋರ್ಟ್ ಇಂದು ವಿಚಾರಣೆ ಮುಂದುವರೆಸಲಿದೆ.


ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದಿರುವುದಕ್ಕೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದವು. ಅವುಗಳ ವಿಚಾರಣೆ ಇಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ನಲ್ಲಿ ನಡೆಯಲಿದೆ.


ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತೃತ ಪೀಠದಲ್ಲಿ ಈ ವಿಚಾರಣೆ ನಡೆಯಲಿದೆ. ಈಗಾಗಲೇ ಹೈಕೋರ್ಟ್, ಸಮವಸ್ತ್ರ ನೀತಿ ಜಾರಿ ಇರುವ ಶಾಲೆ-ಕಾಲೇಜುಗಳಲ್ಲಿ ತರಗತಿಗೆ ಹಾಜರಾಗುವಾಗ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ. ಧಾರ್ಮಿಕ ಗುರುತು ಬಳಸುವಂತಿಲ್ಲವೆಂದು ಎಂದು ಮಧ್ಯಂತರ ಆದೇಶ ನೀಡಿದೆ. ಈ ಕುರಿತಂತೆ ಸಲ್ಲಿಕೆಯಾದ ತಕರಾರು ಅರ್ಜಿಗಳ ವಿಚಾರಣೆ ಕೂಡ ಇಂದು ಮಧ್ಯಾಹ್ನ ಮುಂದುವರೆಯಲಿದೆ.

Previous Post Next Post