ದೇಶದಲ್ಲಿ ಮತ್ತಷ್ಟು ಇಳಿಕೆ ಕಂಡ ಕೋವಿಡ್, ಕಳೆದ 24 ಗಂಟೆಯಲ್ಲಿ 50,407 ಪಾಸಿಟಿವ್

ದೇಶದಲ್ಲಿ ಮತ್ತಷ್ಟು ಇಳಿಕೆ ಕಂಡ ಕೋವಿಡ್, ಕಳೆದ 24 ಗಂಟೆಯಲ್ಲಿ 50,407 ಪಾಸಿಟಿವ್ 

ನವದೆಹಲಿ: ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆ ಕಂಡಿವೆ. ಇಂದು ಹೊಸದಾಗಿ 50,407 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿನಿಂದಾಗಿ 804 ಜನರು ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ.


ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 50,407 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ 804 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.


ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 1,36,962 ಜನರು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಈಗ 6,10,443 (1.43%) ಮಂದಿ ಸಕ್ರೀಯ ಸೋಂಕಿತರು ಇರಿದ್ದಾರೆ. 5,07,981 ಮಂದಿ ಇದುವರೆಗೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
Previous Post Next Post