ಭುಗಿಲೆದ್ದ ಹಿಜಾಬ್ ವಿವಾದ: ನಾಳೆಯಿಂದ ಮೂರು ದಿನ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭುಗಿಲೆದ್ದ ಹಿಜಾಬ್ ವಿವಾದ: ನಾಳೆಯಿಂದ ಮೂರು ದಿನ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 


ಬೆಂಗಳೂರು: ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಪ್ರೌಢ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.


ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಪ್ರೌಢಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.


ಹಲವು ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಪ್ರೌಢ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್​ ತಿಳಿಸಿದರು

Previous Post Next Post