ಇಂದಿನಿಂದ ಕೇರಳ ಮತ್ತು ಗೋವಾದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವಿಲ್ಲ
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಮುಖ್ಯ ಕಾರ್ಯದರ್ಶಿ ಜಿ.ಕೆ.ಅನಿಲ್ಕುಮಾರ್, ರಾಜ್ಯದಲ್ಲಿ ಸದ್ಯ ಕೋವಿಡ್ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ನೆರೆಯ ಗೋವಾ ಹಾಗೂ ಕೇರಳದಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವನ್ನು ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ.
ಅದಾಗ್ಯೂ ಈ ಎರಡು ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರವನ್ನು ತೋರಿಸಬೇಕು ಎಂದು ಸುತ್ತೋಲೆಯಲ್ಲಿ ಆದೇಶವನ್ನು ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರವು ಈ ಹಿಂದೆ 2021ರಲ್ಲಿ ನೆರೆಯ ಮಹಾರಾಷ್ಟ್ರ, ಕೇರಳ, ತಮಿಳುನಾಡು ಹಾಗೂ ಗೋವಾದಿಂದ ಬರುವವರಿಗೆ ಕಡ್ಡಾಯ ಆರ್ಟಿಪಿಸಿಆರ್ ವರದಿ ಮತ್ತು ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಆದೇಶ ಹೊರಡಿಸಿತ್ತು. ಆದರೆ ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಹೆಚ್ಚಿನ ಕರೋನ ಸೋಂಕು ಕಾಣಿಸಿಕೊಂಡಿದ್ದು ಈ ಮೂರು ರಾಜ್ಯಗಳಿಗೆ ನಿಯಮವು ಯಥಾಸ್ಥಿತಿ ಮುಂದುವರೆಯರಿದೆ ಎಂದು ಆದೇಸದಲ್ಲಿ ತಿಳಿಸಿದ್ದಾರೆ.