ಸರಕಾರದ ಎಚ್ಚರಿಕೆಯ ಹೆಜ್ಜೆ: ಮೊದಲ ಹಂತದಲ್ಲಿ ಸೋವಾರದಿಂದ ಹೈಸ್ಕೂಲ್ ಮಾತ್ರ ಆರಂಭ

ಸರಕಾರದ ಎಚ್ಚರಿಕೆಯ ಹೆಜ್ಜೆ: ಮೊದಲ ಹಂತದಲ್ಲಿ ಸೋವಾರದಿಂದ ಹೈಸ್ಕೂಲ್ ಮಾತ್ರ ಆರಂಭ 


ಬೆಂಗಳೂರು :
 ಹಿಜಾಬ್ ವಿವಾದ ಸಂಘರ್ಷ ತೀವ್ರ ಸ್ವರೂಪ ಪಡೆದಿರುವ ಹಿನ್ನಲೆಯಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದು, ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಒಂದೆಡೆ ಹೈಕೋರ್ಟ್ ವಿಸ್ತ್ರತ ಪೀಠ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಿ, ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಲಿ. ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಯಾರೊಬ್ಬರೂ ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬ್ ಮತ್ತು ಶಾಲು) ಬಳಸುವಂತಿಲ್ಲ ಎಂದು ಸೂಚಿಸಿದೆ.


ಕೋರ್ಟ್ ಆದೇಶ ಬರುವ ವರೆಗೆ ಶಾಂತಿ ಸುವ್ಯವಸ್ಥೆಗೆ ಭಂಗ ಬರಬಾರದೆಂಬ ಉದ್ದೇಶದಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದೆ. ಎರಡನೇ ಹಂತದಲ್ಲಿ ಪಿಯುಸಿ ಆರಂಭ ಮಾಡಲಾಗುತ್ತದೆ. ಎಜುಕೇಶನ್ ಡಿಪಾರ್ಟ್ಮೆಂಟ್ ಗಳ ಸಭೆ ಬೆಳಗ್ಗೆ ಮಾಡುತ್ತೇನೆ. ನಾಳೆ ಸಂಜೆ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ. ನಂತರ ಪ್ರಕಟಣೆ ಹೊರಡಿಸುತ್ತೇವೆ ಎಂದಿದ್ದಾರೆ.

أحدث أقدم