ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಇಂದು
ಲಕ್ನೋ : ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ 9 ಸಚಿವರ ಚುನಾವಣಾ ಭವಿಷ್ಯವನ್ನು ಫೆಬ್ರವರಿ 10, ಗುರುವಾರ ಇಂದು ಮತದಾರರು ನಿರ್ಧರಿಸಲಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಹರಡಿರುವ 58 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಮತದಾನ ನಡೆಯಲಿದೆ.
ಮೊದಲ ಹಂತದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. 2017 ರಲ್ಲಿ 58 ಸ್ಥಾನಗಳ ಪೈಕಿ ಬಿಜೆಪಿ 53 ಸ್ಥಾನಗಳನ್ನು ಗಳಿಸಿತ್ತು, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ತಲಾ ಎರಡು ಸ್ಥಾನಗಳನ್ನು ಪಡೆದಿದ್ದರೆ ಒಂದು ಸ್ಥಾನ ರಾಷ್ಟ್ರೀಯ ಲೋಕದಳದ ಪಾಲಾಗಿತ್ತು.