ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಸರಕಾರ ಸೂಚಿಸಿರುವ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿಕೆ ನೀಡಿದ್ದಾರೆ. ಹಿಜಾಬ್ ಗೆ ಅವಕಾಶ ನೀಡುವಂತಹ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.