ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ರಾಜಿನಾಮೆ ಘೋಷಣೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ನಾಳೆ ರಾಜಿನಾಮೆ ಘೋಷಣೆ 


ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪ ಎದುರಿಸುತ್ತಿರುವ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ನಾಳೆ ರಾಜೀನಾಮೆ ಘೋಷಿಸಲಿದ್ದಾರೆ.


ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸೋದಾಗಿ ಘೋಷಿಸಿದರು. ಈ ಮೂಲಕ ಕೊನೆಗೂ ಕಮೀಷನ್ ಆರೋಪದಲ್ಲಿ ಸಚಿವ ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ


ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಮಂಗಳವಾರ (ಏ.12) ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶಾಂಭವಿ ಹೋಟೆಲ್ ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.

Previous Post Next Post