ಸಿಎಂ ಭೇಟಿಯಾಗಿ ಸಚಿವ ಸ್ಥಾನಕ್ಕೆ ಅಧಿಕೃತ ರಾಜಿನಾಮೆ ನೀಡಿದ ಈಶ್ವರಪ್ಪ, ಈಗ ಬರೀ ಶಾಸಕ ಮಾತ್ರ
ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ತೆರಳಿ ಅಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಕ್ಕೂ ಮೊದಲು ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಶುಕ್ರವಾರ ಸಿಎಂ ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು ಅದರಂತೆ ಅವರು ಇಂದು ಸಿಎಂ ಭೇಟಿಯಾಗಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.