ರಾಜ್ಯದಲ್ಲಿ ಇನ್ನೂ 2 ದಿನ ಮುಂದುವರಿಯಲಿದೆ ವರುಣನ ಆರ್ಭಟ: 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯದಲ್ಲಿ ಇನ್ನೂ 2 ದಿನ ಮುಂದುವರಿಯಲಿದೆ ವರುಣನ ಆರ್ಭಟ: 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ 

ಬೆಂಗಳೂರು : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ (Heavy rain) ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.


ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇನ್ನು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮೇ. 20 ರಿಂದ ಮೇ. 22 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Previous Post Next Post