ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 85.63 ಉತ್ತೀರ್ಣ, ಈ ಬಾರಿಯೂ ಬಾಲಕಿಯರೇ ಮೇಲುಗೈ
ಮಲ್ಲೇಶ್ವರದಲ್ಲಿರುವ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಗುರುವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಘೋಷಿಸಿದರು.
ಮಧ್ಯಾಹ್ನ 1 ಗಂಟೆಯ ನಂತರ https://karresults.nic.in/ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದು. ಶುಕ್ರವಾರ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.