ನಾಳೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್‌ಸೈಟ್ ಮಾಹಿತಿ
ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.
ನಂತರ http://kseeb.jar.nic.in, http://SSLC.karnataka.gov.in, http://karresults.nic.in ವೆಬ್ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಬಳಿಕ ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗುತ್ತದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆದಿದ್ದು, 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನಾಳೆ ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದೆ.