UAE ನೂತನ ಅಧ್ಯಕ್ಷರಾಗಿ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಯ್ಕೆ
ನಿನ್ನೆ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ( UAE President Sheikh Khalifa bin Zayed Al Nahyan ) ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗುವುದು ಎಂದು ದುಬೈ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿತ್ತು.
ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಆಯ್ಕೆಯಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್ಪಿ ಶನಿವಾರ ವರದಿ ಮಾಡಿದೆ