ಈ ಬಾರಿ ಶೇ. 61.88 ರಷ್ಟು ಫಲಿತಾಂಶ ಲಭ್ಯವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಕುರಿತು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ನಗರ ಪ್ರದೇಶಗಳಲ್ಲಿ 6.178 ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಪ್ರದೇಶದಲ್ಲಿ 62.18 ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಪ್ರಥಮ ಸ್ಥಾನಪಡೆದಿವೆ ಎಂದು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಕೊನೇಯ ಸ್ಥಾನ ಪಡೆದಿದೆ.
ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸಲು ಈ ವೆಬ್‌ಸೈಟ್ ಬಳಸಿ
karresults.nic.in, result.dk.pucpa.com , kseeb.kar.nic.in, pue.kar.nic.in
ಎಸ್‌ಎಂಎಸ್ ಮೂಲಕವೂ ಫಲಿತಾಂಶ
ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕವೂ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಿಂದ KAR12Roll Number ಟೈಪ್ ಮಾಡಿ 56263 ಸಂಖ್ಯೆಗೆ SMS ಮಾಡುವ ಮೂಲಕ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯಬಹುದಾಗಿದೆ.