ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ನಲ್ಲಿ (Website) ಫಲಿತಾಂಶ ಪ್ರಕಟವಾಗಲಿದ್ದು, ನೋಂದಣಿಗೊಂಡ ವಿದ್ಯಾರ್ಥಿಗಳ (Students) ಮೊಬೈಲ್ಗೆ ಫಲಿತಾಂಶದ ಸಂದೇಶ ರವಾನೆಯಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. 6,84,255 ವಿದ್ಯಾರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದರು.
6,00,519 ರೆಗ್ಯುಲರ್ ವಿದ್ಯಾರ್ಥಿಗಳು, 61,808 ಪುನರಾವರ್ತಿತ ಅಭ್ಯರ್ಥಿಗಳು, 21,928 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಕಲಾ ವಿಭಾಗದಲ್ಲಿ 2,28,167, ವಾಣಿಜ್ಯ ವಿಭಾಗದಲ್ಲಿ 2,45,519 ಹಾಗೂ ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.