ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾದ ಆದಿವಾಸಿ ದ್ರೌಪದಿ ಮುರ್ಮು ಆಯ್ಕೆ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾದ ಆದಿವಾಸಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ: ರಾಷ್ಟ್ರಪತಿ ಚುನಾವಣೆ ( President Election 2022 ) ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರನ್ನು ಘೋಷಿಸಿದ ಬಿಜೆಪಿ ನೇತೃತ್ವದ ಎನ್ಡಿಎ ( 
BJP-led NDA ) ಘೋಷಿಸಿದೆ. ಈ ಮೂಲಕ ಬಿಜೆಪಿಯ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕೆ ಇಳಿಯಲಿದ್ದಾರೆ.ಈಗಾಗಲೇ ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಯಶವಂತ ಸಿನ್ಹ ಅವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಪಕ್ಷದಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
Previous Post Next Post