ಸಿಡಿಲಬ್ಬರ: ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಬಾರಿಸಿ ಇಂಗ್ಲೆಂಡ್ ವಿಶ್ವ ದಾಖಲೆ

ಸಿಡಿಲಬ್ಬರ: ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಬಾರಿಸಿ ಇಂಗ್ಲೆಂಡ್ ವಿಶ್ವ ದಾಖಲೆ 
ಆಮ್ಸ್ಟೆಲ್ವೀನ್ ಮೈದಾನದಲ್ಲಿ ನಡೆದ ಆತಿಥೇಯ ನೆದರ್ಲ್ಯಾಂಡ್ಸ್ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ಹೊಸ ವಿಶ್ವ ದಾಖಲೆ ( ODI World Record) ಬರೆದಿದೆ.


ನಿಗದಿತ 50 ಓವರ್​ಗಳಲ್ಲಿ 498 ರನ್​ ಬಾರಿಸುವ ಮೂಲಕ ಇಂಗ್ಲೆಂಡ್ ತಂಡವು ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ತಂಡವಾಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೂವರು ಬ್ಯಾಟ್ಸ್​ಮನ್​ಗಳು ಶತಕ ಸಿಡಿಸಿ ಮಿಂಚಿದ್ದರು. ವಿಶೇಷ ಎಂದರೆ ಇಂಗ್ಲೆಂಡ್ ತಂಡವು ತನ್ನದೇ ದಾಖಲೆಯನ್ನು ಮುರಿಯುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದೆ. ಈ ಹಿಂದೆ 2018 ರಲ್ಲಿ ಆಸ್ಟ್ರೇಲಿಯಾ ವಿರುದ್ದ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 481 ರನ್​ ಕಲೆಹಾಕಿಸಿ ದಾಖಲೆ ಬರೆದಿತ್ತು. ಇದೀಗ ನೆದರ್ಲ್ಯಾಂಡ್ಸ್​ ವಿರುದ್ದ ಅಬ್ಬರಿಸುವ ಮೂಲಕ ಹಳೆಯ ದಾಖಲೆಯನ್ನು ಮುರಿದು ಹೊಸ ರೆಕಾರ್ಡ್​ ನಿರ್ಮಿಸಿದೆ.
Previous Post Next Post