ಅಹಿತಕರ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜುಲೈ 30) ಶಾಂತಿ ಸಭೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಅಹಿತಕರ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜುಲೈ 30) ಶಾಂತಿ ಸಭೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು, ಜು.29 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.

ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
Previous Post Next Post