ವರುಣಾರ್ಭಟ: ಇನ್ನೂ ನಾಲ್ಕು ದಿನ ಮುಂದುವರಿಯಲಿದೆ ಭಾರೀ ಮಳೆ: ಇಂದು ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವರುಣಾರ್ಭಟ: ಇನ್ನೂ ನಾಲ್ಕು ದಿನ ಮುಂದುವರಿಯಲಿದೆ ಭಾರೀ ಮಳೆ: ಇಂದು ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು,ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್‌ಇ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ದಾವಣಗೆರೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ನಾಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಇನ್ನು ಹಲವು ಜಿಲ್ಲೆಗಳಲ್ಲಿ ಎಡೆಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮನೆಯಿಂದ ಹೊರ ಬರಲಾಗದಂತ ಸ್ಥಿತಿಯನ್ನು ಜನರು ಎದುರಿಸುತ್ತಿದ್ದಾರೆ. ಇದೇ ಕಾರಣದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.


ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Previous Post Next Post