ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

ವದೆಹಲಿ:
 ಸುಪ್ರೀಂಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರು ಶನಿವಾರ (ಆಗಸ್ಟ್ 27) ಪ್ರಮಾಣವಚನ ಸ್ವೀಕರಿಸಿದರು. 

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯುಯು ಲಲಿತ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಮ್ತು ಕೇಂದ್ರ ಸಚಿವರು ಉಪಸ್ಥಿತರಿದ್ದರು.

ನೂತನ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನವೆಂಬರ್ 8ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಯುಯು ಲಲಿತ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ನಿರ್ಗಮಿತ ಸಿಜೆಐ ಎನ್ವಿ ರಮಣ ಅವರು ಶಿಫಾರಸ್ಸು ಮಾಡಿದ್ದರು.


ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್ ವಿ ರಮಣ ಅವರು ಶುಕ್ರವಾರ (ಆಗಸ್ಟ್ 26) ನಿವೃತ್ತಿಯಾಗಿದ್ದರು. ಇಂದು ನಡೆದ ನೂತನ ಸಿಜೆಐ ಪ್ರಮಾಣವಚನ ಸಮಾರಂಭದಲ್ಲಿ ಎನ್ ವಿ ರಮಣ ಅವರು ಭಾಗವಹಿಸಿದ್ದರು.

Previous Post Next Post