ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ ಶುರು, ಮುಂದಿನ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ ಶುರು, ಮುಂದಿನ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 


ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಗಸ್ಟ್ 23, 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Previous Post Next Post