ಬಿಹಾರ: ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ದ್ವಿತೀಯ ಇನಿಂಗ್ಸ್: ಸರಕಾರ ರಚನೆಗೆ ಆರ್ ಜೆಡಿ, ಕಾಂಗ್ರೆಸ್ ರಾಜ್ಯಪಾಲರಿಗೆ ಬೆಂಬಲ ಪತ್ರ

ಬಿಹಾರ: ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ದ್ವಿತೀಯ ಇನಿಂಗ್ಸ್: ಸರಕಾರ ರಚನೆಗೆ ಆರ್ ಜೆಡಿ, ಕಾಂಗ್ರೆಸ್ ರಾಜ್ಯಪಾಲರಿಗೆ ಬೆಂಬಲ ಪತ್ರ  
ಪಾಟ್ನಾ : ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಆಗಿ 2ನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ ಸರ್ಕಾರಕ್ಕೆ ನಿನ್ನೆ ನಿತೀಶ್ ಕುಮಾರ್ ಅಂತ್ಯ ಹಾಡಿದ್ದರು. ಇದೀಗ ಆರ್ಜೆಡಿ-ಜೆಡಿಯು-ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಈ ಮೈತ್ರಿಯ ಹಿಂದಿನ ಅಸಲಿಯತ್ತಿನ ಬಗ್ಗೆ ಬಾರಿ ಚರ್ಚೆಯಾಗುತ್ತಿದೆ. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ನಿರ್ಧಾರಕ್ಕೆ 2024ರಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ಲೆಕ್ಕಾಚಾರವೂ ಇದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ 8ನೇ ಬಾರಿ ಬಿಹಾರದ ಸಿಎಂ ಆಗಿ ನಿತೀಶ್ ಗದ್ದುಗೆ ಏರಲಿದ್ದಾರೆ.

ಮಹಾಘಟಬಂಧನ್ ಸರ್ಕಾರದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಹೊಂದಿರುವ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೊತೆಗೆ, ಗೃಹ ಮಂತ್ರಿ, ಸ್ಪೀಕರ್ ಹುದ್ದೆಗೆ ತೇಜಸ್ವಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ನಿತೀಶ್-ತೇಜಸ್ವಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಪಕ್ಷಗಳ ಬಲಾಬಲ: ಜೆಡಿಯುನಲ್ಲಿ 45 ಶಾಸಕರಿದ್ದರೆ ಆರ್‌ಜೆಡಿಯಲ್ಲಿ 79 ಶಾಸಕರಿದ್ದಾರೆ, ಬಿಹಾರ ವಿಧಾನಸಭೆಯಲ್ಲೇ ಅತ್ಯಂತ ದೊಡ್ಡ ಪಕ್ಷ ಎನಿಸಿದೆ. ಎರಡೂ ಪಕ್ಷಗಳು ಒಟ್ಟಾದರೆ 124 ಶಾಸಕರ ಬಲ ಆ ಮೈತ್ರಿಗೆ ದೊರೆಯಲಿದೆ. ಇನ್ನು ಕಾಂಗ್ರೆಸ್‌ (19 ಶಾಸಕರು) ಮತ್ತು ಎಡಪಕ್ಷಗಳು (16 ಶಾಸಕರು) ಸಹ ಬೆಂಬಲ ನೀಡುವುದಾಗಿ ಹೇಳಿವೆ.
Previous Post Next Post