ದಕ್ಷಿಣ ಕನ್ನಡ: ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ಆದೇಶ ವಾಪಸ್: ಕಮಿಷನರ್ ಶಶಿಕುಮಾರ್

ದಕ್ಷಿಣ ಕನ್ನಡ: ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ಆದೇಶ ವಾಪಸ್: ಕಮಿಷನರ್ ಶಶಿಕುಮಾರ್


ಮಂಗಳೂರು, ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ‌


ಇದೇ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.


ಆಗಸ್ಟ್ 5ರಿಂದ ರಾತ್ರಿ ನಿರ್ಭಂದ 9 ಗಂಟೆಯವರೆಗೆ ಸಡಿಲಿಕೆ, 


ಮಂಗಳೂರು, ಆ.4: ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.

ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ. ಆ. 5ರಿಂದ ಮದ್ಯದಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಸೆಕ್ಷನ್ 144 ಈ ಹಿಂದಿನಂತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

Previous Post Next Post