ಬ್ರಿಟನ್ ರಾಣಿ ಎಲಿಝಬೆತ್ ನಿಧನ
ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ || ಗುರುವಾರ ನಿಧರಾಗಿದ್ದಾರೆ. 96 ವರ್ಷದ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ವೈದ್ಯರ ನಿಗಾದಲ್ಲಿ ಅವರನ್ನು ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳದಿದ್ದಾರೆ ಎಂದು ವರದಿಯಾಗಿದೆ."ಇಂದು ಬೆಳಗ್ಗೆ ಹೆಚ್ಚಿನ ಪರೀಕ್ಷೆಯ ಬಳಿಕ, ರಾಣಿಯ ವೈದ್ಯರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಅವರು ವೈದ್ಯಕೀಯ ನಿಗಾದಲ್ಲಿ ಉಳಿಯಲು ಶಿಫಾರಸು ಮಾಡಿದ್ದರು. ನಂತರ ಅವರ ಹಿರಿಯ ಮಗ ಮತ್ತು ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ ಸಹಿತ ಕುಟುಂಬಸ್ಥರು ರಾಣಿ ಎಲಿಝಬೆತ್ ತಂಗಿದ್ದ ಅರಮನೆಗೆ ಆಗಮಿಸಿದ್ದರು.