ಸಚಿವ ಉಮೇಶ್ ಕತ್ತಿ ವಿಧಿವಶ: ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.