ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪ್ರಸಿಡೆಂಟ್: 24 ವರ್ಷಗಳ ಬಳಿಕ ಗಾಂಧಿಯೇತರ ವ್ಯಕ್ತಿಗೆ ಕಾಂಗ್ರೆಸ್ ಗದ್ದುಗೆ
ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ.ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗೆಯೇ, ೪೧೬ ಮತಗಳು ಅಸಿಂಧುಗೊಂಡಿವೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು.