ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಇಂದು 11.30 ಕ್ಕೆ ಸುದ್ದಿಗೋಷ್ಠಿ

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಇಂದು 11.30 ಕ್ಕೆ ಸುದ್ದಿಗೋಷ್ಠಿ 


ವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇವತ್ತೇ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 11:30 ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದ್ದು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.


ಚುನಾವಣೆ ಘೋಷಣೆಯಾದ ಕ್ಷಣದಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಆಗಲಿದೆ. ಇಂದು ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿರುವ ಚುನಾವಣಾ ಆಯುಕ್ತರು ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ಮತದಾನದ ದಿನಾಂಕ, ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಲಿದ್ದಾರೆ.

Previous Post Next Post