ನಾಳೆ ಚುನಾವಣಾ ಅಧಿಸೂಚನೆ ಪ್ರಕಟ: ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭ ನಾಳೆಯಿಂದ

ನಾಳೆ ಚುನಾವಣಾ ಅಧಿಸೂಚನೆ ಪ್ರಕಟ: ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭ ನಾಳೆಯಿಂದ


ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ನಾಳೆ ಅಧಿಸೂಚನೆ ಪ್ರಕಟಿಸುವುದರೊಂದಿಗೆ ವಿಧಾನಸಭೆ ಚುನಾವಣೆ ರಂಗೇರಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಚಾರದ ಅಬ್ಬರ ಹೆಚ್ಚಾಗಲಿದೆ. ಚುನಾವಣಾ ಆಯೋಗದಿಂದ ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 2.63 ಕೋಟಿ ಪುರುಷರು, 2.60 ಮಹಿಳಾ ಮತದಾರರು ಸೇರಿ 5.24 ಕೋಟಿ ಮತದಾರರಿದ್ದಾರೆ.


ಚುನಾವಣಾ ವೇಳಾಪಟ್ಟಿ ಹೀಗಿದೆ

ನಾಮಪತ್ರ ಸಲ್ಲಿಸಲು ಕೊನೆಯ ದಿನ: ಎ.20

ನಾಮಪತ್ರಗಳ ಪರಿಶೀಲನೆ: ಎ.21

ನಾಮಪತ್ರ ಪಾಪಸ್ ಪಡೆಯಲು ಕೊನೆಯ ದಿನ: ಎ.24

ಮತದಾನ: ಮೇ.10

ಮತ ಎಣಿಕೆ: ಮೇ.13

أحدث أقدم